TSK

TSK · ಮತ್ತಾಯನು 7:23

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.

‹ಆದರೆ ಆತನು ಅವರಿಗೆ ಉತ್ತರವಾಗಿ, ‘ನಿಮ್ಮನ್ನು ನಾನರಿಯೆನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅಂದನು.›

‹ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು›

‹ನಾನೇ ನಿಜವಾದ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ಬಲ್ಲವನಾಗಿದ್ದೇನೆ. ನನ್ನ ಕುರಿಗಳು ನನ್ನನ್ನು ಬಲ್ಲವು.›

ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.