TSK

TSK · ಮತ್ತಾಯನು 7:28

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ.

¶ ಯೇಸು ಈ ಸಾಮ್ಯಗಳನ್ನು ಹೇಳಿ ಮುಗಿಸಿದ ಮೇಲೆ ಅಲ್ಲಿಂದ ಹೊರಟು ಹೋದನು.

ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು.

ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.

ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.

ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.

ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು, “ಶಾಸ್ತ್ರಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವುದಾದರೂ ಹೇಗೆ?” ಎಂದರು.