TSK

TSK · ಮತ್ತಾಯನು 8:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವನು ಕುಷ್ಠರೋಗಿ ಮತ್ತು ಅಶುದ್ಧನು. ಅವನ ತಲೆಯ ಮೇಲೆ ಕುಷ್ಠದ ಗುರುತು ಕಾಣಿಸಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.

ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು.

ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.

ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು.

ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.

ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು.

¶ ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.

‹ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.›

ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.

‹ಆ ಸೇವಕನು ಮೊಣಕಾಲೂರಿ ತನ್ನ ತಲೆಯನ್ನು ಬಾಗಿ ಅವನಿಗೆ, ‘ಒಡೆಯನೇ, ನನ್ನ ಮೇಲೆ ತಾಳ್ಮೆಯಿರಲಿ, ನಿನ್ನದೆಲ್ಲವನ್ನೂ ನಾನು ಕೊಟ್ಟು ತೀರಿಸುತ್ತೇನೆಂದು’ ಹೇಳಿದನು.›

¶ ಯೇಸು ಬೇಥಾನ್ಯದಲ್ಲಿ ಸೀಮೋನನೆಂಬ ಕುಷ್ಠರೋಗಿಯ ಮನೆಯಲ್ಲಿ ಊಟಕ್ಕೆ ಕುಳಿತಿರುವಾಗ ಒಬ್ಬ ಸ್ತ್ರೀಯು

ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.

ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು,

‹ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಅನೇಕ ಕುಷ್ಠರೋಗಿಗಳು ಇದ್ದಾಗ್ಯೂ, ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸಿರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು”› ಎಂದು ಹೇಳಿದನು.

ಒಂದು ಹಳ್ಳಿಗೆ ಬಂದಾಗ ಹತ್ತುಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು,

ಪೇತ್ರನು ಬಂದಾಗ ಕೊರ್ನೆಲ್ಯನು ಅವನನ್ನು ಎದುರುಗೊಂಡು ಅವನ ಪಾದಕ್ಕೆ ಬಿದ್ದು ನಮಸ್ಕಾರ ಮಾಡಿದನು.

¶ ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.