TSK

TSK · ಮತ್ತಾಯನು 8:20

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ಕರ್ತನೇ ನನ್ನ ಹಿತಚಿಂತಕನು. ನನ್ನ ದೇವರೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.

ಆಹಾ, ಸೇನಾಧೀಶ್ವರನಾದ ಯೆಹೋವ ದೇವರೇ, ನನ್ನ ಅರಸನೇ, ನಿನ್ನ ಯಜ್ಞವೇದಿಗಳ ಸಮೀಪದಲ್ಲಿಯೇ ಗುಬ್ಬಿಗೆ ಮನೆಯೂ, ಪಾರಿವಾಳಕ್ಕೆ ಮರಿಮಾಡುವ ಗೂಡೂ ದೊರಕಿತಲ್ಲಾ!

ನಾನು ಬಡವನೂ, ದೀನನೂ ಆಗಿದ್ದೇನಲ್ಲಾ! ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ.

ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯ ಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.

‹ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ.›

¶ ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, ‹“ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ”› ಎಂದು ತನ್ನ ಶಿಷ್ಯರನ್ನು ಕೇಳಿದನು.

¶ ಅವರು ಆ ಬೆಟ್ಟದಿಂದ ಇಳಿದು ಬರುತ್ತಿರುವಾಗ ಯೇಸು ಅವರಿಗೆ, ‹“ಈ ದರ್ಶನದ ಬಗ್ಗೆ ಮನುಷ್ಯಕುಮಾರನು ಸತ್ತು ಜೀವಿತನಾಗಿ ಎಬ್ಬಿಸಲ್ಪಡುವ ತನಕ ಯಾರಿಗೂ ಹೇಳಬಾರದು”› ಎಂದು ಆಜ್ಞಾಪಿಸಿದನು.

ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.

ತ್ವರೆಯಾಗಿ ಹೋಗಿ ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು.

ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.