ಅರಣ್ಯಕಾಂಡ 6:6
TSK
ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳಲ್ಲಿ ಯಾವ ಶವವನ್ನೂ ಮುಟ್ಟಬಾರದು.
TSK
Treasury of Scripture Knowledge references in ಕನ್ನಡ IRV.
ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳಲ್ಲಿ ಯಾವ ಶವವನ್ನೂ ಮುಟ್ಟಬಾರದು.
ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.
‹ಮತ್ತು ನನ್ನ ಹೆಸರಿನ ನಿಮಿತ್ತ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಭೂಮಿಯನ್ನಾಗಲಿ, ತೊರೆದುಬಿಟ್ಟಿರುವ ಪ್ರತಿಯೊಬ್ಬನೂ ಎಲ್ಲವನ್ನೂ ನೂರರಷ್ಟು ಹೊಂದುವನು. ಅಲ್ಲದೆ ನಿತ್ಯಜೀವಕ್ಕೆ ಬಾಧ್ಯನಾಗುವನು.›
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.