¶ ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು.
TSK
TSK · ಮತ್ತಾಯನು 8:3
Treasury of Scripture Knowledge references in ಕನ್ನಡ IRV.
ಅವನು ಯೊರ್ದನ್ ನದಿಗೆ ಹೋಗಿ ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೇವರ ಮನುಷ್ಯನ ಮಾತಿಗನುಸಾರವಾಗಿ ಅವನ ದೇಹವು ಕೂಸಿನ ದೇಹದಂತೆ ಶುದ್ಧವಾಯಿತು.
ಯೇಸು ಅವರಿಗೆ ಪ್ರತ್ಯುತ್ತರವಾಗಿ, ‹“ನೀವು ಹೋಗಿ ಕಾಣುವವುಗಳನ್ನು ಕೇಳುವವುಗಳನ್ನು ಯೋಹಾನನಿಗೆ ತಿಳಿಸಿರಿ;›
ಆತನು ಎದ್ದು ಗಾಳಿಯನ್ನು ಗದರಿಸಿ, ಸಮುದ್ರಕ್ಕೆ ‹“ಶಾಂತವಾಗಿರು, ಮೊರೆಯಬೇಡ”› ಎಂದು ಅಪ್ಪಣೆಕೊಡುತ್ತಲೇ ಗಾಳಿ ನಿಂತುಹೋಗಿ ಸಮುದ್ರವು ಶಾಂತವಾಯಿತು.
ಆಕಾಶದ ಕಡೆಗೆ ನೋಡಿ ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ, ‹“ಎಪ್ಫಥಾ”› ಎಂದು ಹೇಳಿದನು. ಆ ಶಬ್ದಕ್ಕೆ ‹“ತೆರೆಯಲಿ”› ಎಂದರ್ಥ.
ಆತನು ಕೈನೀಡಿ ಅವನನ್ನು ಮುಟ್ಟಿ, ‹“ನನಗೆ ಮನಸ್ಸುಂಟು, ಶುದ್ಧನಾಗು”› ಅಂದನು. ಕೂಡಲೆ ಅವನ ಕುಷ್ಠವು ವಾಸಿಯಾಯಿತು.
ಆತನು ಅವರನ್ನು ನೋಡಿ, ‹“ನೀವು ಹೋಗಿ ಯಾಜಕರಿಗೆ ನಿಮ್ಮ ಮೈ ತೋರಿಸಿಕೊಳ್ಳಿರಿ”› ಎಂದು ಹೇಳಿದನು. ಅವರು ಹೋಗುತ್ತಿರುವಾಗಲೇ ಶುದ್ಧರಾದರು.
ಆತನು ಹೀಗೆ ಹೇಳಿದ ಮೇಲೆ, ‹“ಲಾಜರನೇ, ಹೊರಗೆ ಬಾ!”› ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.