TSK

TSK · ಮತ್ತಾಯನು 9:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.

ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.

ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ, ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.”

ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.

ಯೇಸು ಅದನ್ನು ಕೇಳಿ ಅವರಿಗೆ, ‹“ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ; ಕ್ಷೇಮವಿಲ್ಲದವರಿಗೆ ಬೇಕು. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದಾತನಲ್ಲ, ಪಾಪಿಗಳನ್ನು ಕರೆಯುವುದಕ್ಕೆ ಬಂದವನು”› ಅಂದನು.

¶ ಆಗ ಹನ್ನೆರಡು ವರ್ಷದಿಂದ ರಕ್ತಸ್ರಾವ ರೋಗವಿದ್ದ ಒಬ್ಬ ಹೆಂಗಸು ಅಲ್ಲಿಗೆ ಬಂದಿದ್ದಳು. ಆಕೆಯು ತನ್ನ ಬಳಿ ಇದ್ದ ಹಣವನ್ನೆಲ್ಲಾ ವೆಚ್ಚಮಾಡಿದರೂ ಒಬ್ಬ ವೈದ್ಯರಿಂದಲೂ ಗುಣಹೊಂದಲಾರದೆ ಇದ್ದಳು.

‹ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.›

‹ನೀನು ನಿನ್ನ ವಿಷಯದಲ್ಲಿ›‹ನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು,›‹ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.›