TSK

TSK · ಮತ್ತಾಯನು 9:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಸಿಕ್ಕುವ ಕಾಲದಲ್ಲಿ ಆತನನ್ನು ಆಶ್ರಯಿಸಿರಿ, ಆತನು ಸಮೀಪದಲ್ಲಿರುವಾಗ ಆತನಿಗೆ ಬಿನ್ನಹಮಾಡಿರಿ.

ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?

ನೀವು ಮಾನಸಾಂತರ ಹೊಂದಿರುವಿರಿ ಎಂಬುದಕ್ಕೆ ಯೋಗ್ಯವಾದ ಫಲವನ್ನು ತೋರಿಸಿರಿ.

¶ ಅನಂತರ ಆತನು ತನ್ನ ಮಹತ್ಕಾರ್ಯಗಳು ಬಹಳವಾಗಿ ನಡೆದ ಊರುಗಳವರು ಮಾನಸಾಂತರಪಡಲಿಲ್ಲವೆಂದು ಅವುಗಳನ್ನು ಗದರಿಸತೊಡಗಿದನು.

‹ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಹೊಲೆಮಾಡಿದಾಗ್ಯೂ ಅವರು ನಿರಪರಾಧಿಗಳಾಗಿದ್ದಾರೆ. ಇದನ್ನು ನೀವು ಧರ್ಮಶಾಸ್ತ್ರದಲ್ಲಿ ಓದಲಿಲ್ಲವೋ?›

‹ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ›‹ಪರಲೋಕದಲ್ಲಿ ಇವರ ದೂತರು ನನ್ನ ಸ್ವರ್ಗೀಯ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿರುತ್ತಾರೆ ಎಂದು ನಿಮಗೆ ಹೇಳುತ್ತೇನೆ.›

‹ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು›

‹ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,›

‹ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ›‹‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’›

ಆತನು ಅವನಿಗೆ, ‹“ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?”› ಎಂದು ಕೇಳಿದನು.

‹ಮನುಷ್ಯಕುಮಾರನು ದಾರಿತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕೆ ಬಂದನು”› ಎಂದು ಹೇಳಿದನು.

ಅದಕ್ಕೆ ಯೇಸು, ‹“‘ನೀವು ದೇವರುಗಳೇ ಆಗಿದ್ದೀರಿ ಎಂದು ನಾನು ಹೇಳಿದೆನು’ ಎಂಬುದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿಲ್ಲವೋ?›

ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ

¶ ಈ ಮಾತುಗಳನ್ನು ಅವರು ಕೇಳಿ ಆಕ್ಷೇಪಣೆ ಮಾಡುವುದನ್ನು ಬಿಟ್ಟು; “ಹಾಗಾದರೆ ದೇವರು ಅನ್ಯಜನರಿಗೂ ಜೀವಕೊಡಬೇಕೆಂದು ಅವರ ಮನಸ್ಸುಗಳನ್ನು ತನ್ನ ಕಡೆಗೆ ತಿರುಗಿಸಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.

ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.

ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?

ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,

ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.