TSK

TSK · ಮತ್ತಾಯನು 9:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಕೆಯು ಬೂಟೇದಾರಿ ವಸ್ತ್ರಗಳನ್ನು ಧರಿಸಿಕೊಂಡು, ಅವಳ ಸೇವೆಗಾಗಿ ಕನ್ಯೆಯರಾದ ಸಖೀಯರು ಅವಳನ್ನು ಹಿಂಬಾಲಿಸಿ, ಅರಸನ ಬಳಿಗೆ ಬರುವರು.

¶ ‹“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು›‹ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.›

ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.

‹ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ.›‹ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ›‹ನಿಮ್ಮ ದುಃಖವು ಹೋಗಿ ಆನಂದ ಬರುವುದು.›

¶ ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.

ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.

ಇದಲ್ಲದೆ ಅವನು ನನ್ನ ಸಂಗಡ ಮಾತನಾಡುತ್ತಾ, “ಯಜ್ಞದ ಕುರಿಮರಿಯಾದಾತನ ವಿವಾಹದ ಔತಣಕ್ಕೆ ಆಹ್ವಾನಿಸಲ್ಪಟ್ಟವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿ, “ಈ ಮಾತುಗಳು ದೇವರ ಸತ್ಯವಚನಗಳಾಗಿವೆ” ಅಂದನು.