TSK

TSK · ಮತ್ತಾಯನು 9:27

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

‹ಕುರುಡರು ನೋಡುತ್ತಿದ್ದಾರೆ, ಕುಂಟರು ನಡೆಯುತ್ತಿದ್ದಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಿದ್ದಾರೆ, ಕಿವುಡರು ಕೇಳುತ್ತಿದ್ದಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಿದ್ದಾರೆ, ಮತ್ತು ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದ್ದೆ.›

ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.

ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು.

ಆದರೆ ಮುಖ್ಯಯಾಜಕರೂ ಶಾಸ್ತ್ರಿಗಳೂ ಆತನು ಮಾಡಿದ ಆಶ್ಚರ್ಯಕರವಾದ ಕಾರ್ಯಗಳನ್ನು ನೋಡಿ ಹಾಗು “ದಾವೀದನ ಕುಮಾರನಿಗೆ ಹೊಸನ್ನ” ಎಂದು ದೇವಾಲಯದಲ್ಲಿ ಹುಡುಗರು ಕೂಗುತ್ತಿರುವುದನ್ನು ಕೇಳಿ ಕೋಪಗೊಂಡರು.

¶ ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.

¶ ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸುವೂ ತನ್ನ ಶಿಷ್ಯರೂ ಬಹು ಜನರ ಗುಂಪಿನೊಂದಿಗೆ ಆ ಊರಿನಿಂದ ಹೊರಟುಹೋಗುತ್ತಿರುವಾಗ ತಿಮಾಯನ ಮಗನಾದ ಬಾರ್ತಿಮಾಯನು ದಾರಿಯ ಬದಿಯಲ್ಲಿ ಕುಳಿತಿದ್ದನು.

¶ ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, ‹“ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ?›

“ಯೇಸುವೇ, ಗುರುವೇ, ನಮ್ಮ ಮೇಲೆ ದಯವಿಡು” ಎಂದು ಕೂಗಿ ಹೇಳಿದರು.

¶ ಆಗ ಯೇಸು, ‹“ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?›

¶ ಯೇಸು ಹಾದು ಹೋಗುತ್ತಿದ್ದಾಗ, ಹುಟ್ಟು ಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡನು.

ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.