TSK

TSK · ಮತ್ತಾಯನು 9:33

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಇಸ್ರಾಯೇಲರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ, “ನೀನು, ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು, ಇಸ್ರಾಯೇಲರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬುದು ಅವನಿಗೆ ಗೊತ್ತಾಗಲಿ” ಎಂದು ಹೇಳಿ ಕಳುಹಿಸಿದನು.

ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯು ಹರ್ಷಧ್ವನಿಗೈಯುವುದು, ಅರಣ್ಯದಲ್ಲಿ ಒರತೆಗಳು ಒಡೆಯುವವು, ಮರುಭೂಮಿಯಲ್ಲಿ ನದಿಗಳು ಹುಟ್ಟಿ ಹರಿಯುವವು.

ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.

ಆಗ ಕೆಲವರು ತೊದಲು ಮಾತನಾಡುವ ಒಬ್ಬ ಕಿವುಡನನ್ನು ಆತನ ಬಳಿಗೆ ಕರೆದುಕೊಂಡು ಬಂದು, ಇವನ ಮೇಲೆ ನಿನ್ನ ಕೈಯಿಡಬೇಕು ಎಂದು ಆತನನ್ನು ಬೇಡಿಕೊಂಡರು.

¶ ಒಮ್ಮೆ ಯೇಸು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು.