TSK

TSK · ಮಿಕ 1:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

“ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; ಮೇಘಮಂಡಲವು ಮಳೆಗರೆಯಿತು.

ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.

ಸೇನಾಧೀಶ್ವರನಾದ ಯೆಹೋವನು ಭೂಮಿಯನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುತ್ತದೆ; ಸಕಲ ನಿವಾಸಿಗಳು ಗೋಳಾಡುತ್ತಾರೆ; ನೆಲವೆಲ್ಲಾ ನೈಲ್ ನದಿಯಂತೆ ಉಬ್ಬಿ, ಐಗುಪ್ತದ ನದಿಯ ಹಾಗೆಯೇ ಇಳಿದು ಹೋಗುತ್ತದೆ.

ಆತನು ನಿಂತುಕೊಳ್ಳಲು ಭೂಮಿಯು ಅಳೆದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು.

ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.

¶ ಆ ಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕುಳಿತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋದವು, ಆದರೆ ಹೋಗುವುದಕ್ಕೆ ಅವುಗಳಿಗೆ ಸ್ಥಳವಿರಲಿಲ್ಲ.