TSK

TSK · ಮಿಕ 2:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “‘ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ತ್ಯಜಿಸುವುದಿಲ್ಲ.

ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಸ್ವತ್ತಿಗೆ ಸೇರಿ ನೀವು ಇನ್ನೂ ವಿಶ್ರಾಂತಿ ಹೊಂದಲಿಲ್ಲವಲ್ಲಾ.

ನಿಮ್ಮ ದೇವರಾದ ಯೆಹೋವನು ತನ್ನ ವಾಗ್ದಾನಕ್ಕನುಸಾರವಾಗಿ ಈಗ ನಿಮಗೆ ಎಲ್ಲಾ ತರದ ಮೇಲನ್ನು ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಸಕಲ ವಿಧವಾದ ಕೇಡುಗಳನ್ನು ಬರಮಾಡಿ, ತಾನು ಕೊಟ್ಟಿರುವ ಈ ಉತ್ತಮ ದೇಶದಿಂದ ನಿಮ್ಮನ್ನು ತೆಗೆದು ನಾಶಮಾಡಿಬಿಡುವನು.

¶ ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.

ಅವುಗಳಿಗೆ ಕೈಮುಗಿಯುವುದಾದರೆ ನಾನು ಇಸ್ರಾಯೇಲ್ಯರಿಗೆ ಕೊಟ್ಟ ನನ್ನ ದೇಶದಿಂದ ಅವರನ್ನು ಹೊರಗೆ ಹಾಕಿ ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿ ಅದು ಎಲ್ಲಾ ಜನಾಂಗಗಳವರಿಗೂ ಶಾಪದ ಮಾದರಿ ಮಾತಾಗಿಯೂ ನಿಂದೆಗೆ ಆಸ್ಪದವಾಗುವಂತೆಯೂ ಮಾಡುವೆನು.

ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.

ಕಣ್ಣೆತ್ತಿ ಬೋಳು ಗುಡ್ಡಗಳನ್ನು ನೋಡು, ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚು ಹಾಕುತ್ತಾ ಕುಳಿತಿದ್ದಿ; ನಿನ್ನ ವ್ಯಭಿಚಾರದಿಂದಲೂ, ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದಿ.

“ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.

“ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ, ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು; ಅವರ ನಡತೆಯು ಮುಟ್ಟಿನ ಅಶುದ್ಧತ್ವದ ಹಾಗಿತ್ತು.

¶ ಹೀಗಿರಲಾಗಿ, ದೇವರ ವಿಶ್ರಾಂತಿಯಲ್ಲಿ ಸೇರಬಹುದೆಂಬ ವಾಗ್ದಾನ ಇನ್ನೂ ಇರುವುದರಿಂದ ನಿಮ್ಮಲ್ಲಿ ಯಾವನಾದರೂ ಅದರಿಂದ ತಪ್ಪಿಹೋಗದಂತೆ ನಾವು ಭಯಭಕ್ತಿಯಿಂದ ಇರೋಣ.