TSK

TSK · ಮಿಕ 2:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಪ್ರತಿಯೊಂದು ಕುಲದಿಂದ ಮೂರು ಮೂರು ಜನರನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ದೇಶದಲ್ಲೆಲ್ಲಾ ಸಂಚರಿಸಿ ತಮ್ಮ ತಮ್ಮ ಕುಲಗಳಿಗನುಸಾರವಾಗಿ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.

ಯೆಹೋವನು ತನ್ನ ಸೇವಕರಾದ ಎಲ್ಲಾ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದಂತೆ, ಇಸ್ರಾಯೇಲರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಟ್ಟನು. ಅವರು ಸೆರೆಯವರಾಗಿ ತಮ್ಮ ದೇಶದಿಂದ ಅಶ್ಶೂರ್ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲಿಯೇ ಇದ್ದಾರೆ.

ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಆದ್ದೋನ್ ಮತ್ತು ಇಮ್ಮೇರ್, ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರಗಳ ವಂಶಾವಳಿಗಳನ್ನು ತೋರಿಸಿ ತಾವು ಇಸ್ರಾಯೇಲರೆಂಬುದನ್ನು ಸ್ಥಾಪಿಸಲಾರದವರಾದ,

ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.