ಯೆರೆಮಿಯ 22:13
TSK
ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ,
TSK
Treasury of Scripture Knowledge references in ಕನ್ನಡ IRV.
ತನ್ನ ಅರಮನೆಯನ್ನು ದುರ್ನೀತಿಯಿಂದಲೂ, ಮಹಡಿಗಳನ್ನು ಅನ್ಯಾಯದಿಂದಲೂ ಕಟ್ಟಿಸಿಕೊಳ್ಳುವವನ ಗತಿಯನ್ನು ಏನು ಹೇಳಲಿ! ಕೂಲಿಕೊಡದೆ ನೆರೆಯವನಿಂದ ಬಿಟ್ಟಿಕೆಲಸವನ್ನು ಮಾಡಿಸಿ,
ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.
ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.
ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು.