TSK

TSK · ಮಿಕ 3:4

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ನಾನು ಅವರ ಮೇಲೆ ಬಲುಕೋಪಗೊಂಡು ಅವರನ್ನು ಬಿಟ್ಟು ಅವರಿಗೆ ವಿಮುಖನಾಗಿರುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಮತ್ತು ಅನೇಕ ಕಷ್ಟಗಳೂ ಹಾಗು ವಿಪತ್ತುಗಳೂ ಅವರಿಗೆ ಒದಗುವವು. ಆಗ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿತ್ತಲ್ಲ’ ಅಂದುಕೊಳ್ಳುವರು.

ಆಗ ನೀವು ಆರಿಸಿಕೊಂಡ ಅರಸನ ದೆಸೆಯಿಂದ ಆ ದಿನದಲ್ಲಿ ಬೇಸತ್ತು ಯೆಹೋವನಿಗೆ ಮೊರೆಯಿಡುವಿರಿ. ಆಗ ಆತನು ನಿಮ್ಮನ್ನು ಲಕ್ಷಿಸುವುದಿಲ್ಲ” ಅಂದನು.

ಅವರು ಕೂಗಿಕೊಂಡರೂ ರಕ್ಷಿಸುವವನಿಲ್ಲ; ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.

ದುಷ್ಟರ ಗತಿಯನ್ನು ಏನು ಹೇಳಲಿ! ಅವರ ಕಾರ್ಯಗಳಿಗೆ ತಕ್ಕ ಪ್ರತಿಫಲವು ಅವರಿಗೆ ದೊರಕುವುದು.

ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ.

ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

ಈ ಊರಿನವರು ಕಸ್ದೀಯರನ್ನು ಪ್ರತಿಭಟಿಸುವುದಕ್ಕೆ ಹೊರಟರೆ ಏನು? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರು; ಇವರ ಅಧರ್ಮವನ್ನು ಕಂಡು ಈ ಪಟ್ಟಣಕ್ಕೆ ವಿಮುಖನಾಗಿ ಕೋಪ ರೋಷಭರಿತನಾದ ನಾನೇ ಇವರನ್ನು ಹತಿಸುವೆನು.

ಆದಕಾರಣ ಯೆಹೋವನು ಇಂತೆನ್ನುತ್ತಾನೆ, “ಇಗೋ ಈ ವಂಶಕ್ಕೆ ನಾನೇ ಕೇಡನ್ನು ಕಲ್ಪಿಸುತ್ತೇನೆ, ಅದರ ಭಾರದಿಂದ ನಿಮ್ಮ ಕುತ್ತಿಗೆಗಳನ್ನು ತಪ್ಪಿಸಿಕೊಳ್ಳಲಾರಿರಿ, ನೀವು ತಲೆಯೆತ್ತಿ ನಡೆಯುವುದಕ್ಕಾಗದು. ಅದು ಕೆಟ್ಟ ಕಾಲವೇ ಸರಿ.

‹ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.›

ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.

ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.