TSK

TSK · ಮಿಕ 3:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ.

¶ “ಅವರು, ಪರದೇಶಿ, ಅನಾಥ, ಇವರ ವ್ಯಾಜ್ಯದಲ್ಲಿ ನ್ಯಾಯ ಬಿಟ್ಟು ತೀರ್ಪುಹೇಳಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?

ಕೊಬ್ಬಿ ಢಾಂಭಿಕರಾಗಿದ್ದಾರೆ; ಇದಲ್ಲದೆ ದುಷ್ಕೃತ್ಯಗಳಲ್ಲಿ ನಿಸ್ಸೀಮರಾಗಿದ್ದಾರೆ. ಅನಾಥರ ವೃದ್ಧಿಗಾಗಿ ಅವರ ಪರವಾಗಿ ವ್ಯಾಜ್ಯ ನಡೆಸರು, ದಿಕ್ಕಿಲ್ಲದವರಿಗೆ ನ್ಯಾಯದೊರಕಿಸರು.

ಅವರು ನ್ಯಾಯವನ್ನು ಕಹಿಮಾಡುವವರು ಮತ್ತು ಧರ್ಮವನ್ನು ನೆಲಕ್ಕೆ ಕೆಡವಿಬಿಡುವವರು!”