TSK

TSK · ಮಿಕ 5:9

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನೇ, ಏಳು; ದೇವರೇ, ಕುಗ್ಗಿದವನನ್ನು ಮರೆಯಬೇಡ; ಅವನನ್ನು ರಕ್ಷಿಸುವುದಕ್ಕೆ ಕೈಚಾಚು.

ಆದರೆ ಅವರು ಪಶ್ಚಿಮದಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆಮಾಡುವರು. ಎದೋಮಿನ ಮತ್ತು ಮೋವಾಬಿನ ಮೇಲೆ ಕೈಮಾಡುವರು. ಅಮ್ಮೋನಿಯರು ಅವರಿಗೆ ಅಧೀನರಾಗುವರು.

ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.

¶ ಆಗ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿ ಸೈನಿಕರನ್ನು ಸಂಹರಿಸಿದನು. ಬೆಳಿಗ್ಗೆ ಎದ್ದು ನೋಡುವಲ್ಲಿ ಅವರೆಲ್ಲರು ಹೆಣಗಳಾಗಿದ್ದರು.

ನಾನು ಎಫ್ರಾಯೀಮಿನ ರಥಬಲವನ್ನೂ, ಯೆರೂಸಲೇಮಿನ ಅಶ್ವಬಲವನ್ನೂ ನಿಶ್ಶೇಷಮಾಡುವೆನು; ಯುದ್ಧದ ಬಿಲ್ಲು ಇಲ್ಲವಾಗುವುದು; ಆತನು ಕೊಡುವ ಅಪ್ಪಣೆಯು ಜನಾಂಗಗಳಿಗೆ ಸಮಾಧಾನಕರವಾಗಿರುವುದು; ಆತನ ಆಳ್ವಿಕೆಯು ಸಮುದ್ರದಿಂದ ಸಮುದ್ರದವರೆಗೂ ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಹರಡಿಕೊಂಡಿರುವುದು.

ಯಾಕೆಂದರೆ ತಾನು ಎಲ್ಲಾ ವಿರೋಧಿಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ರಾಜ್ಯವನ್ನಾಳುವುದು ಅವಶ್ಯ.

ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ದೇಶಗಳನ್ನು ಮೋಸಗೊಳಿಸಿ, ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಯುದ್ಧಕ್ಕೆ ಸೇರಿಸುವನು. ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವುದು.