TSK

TSK · ಮಿಕ 6:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಕಾಶಮಂಡಲವೇ, ನನ್ನ ಮಾತುಗಳಿಗೆ ಕಿವಿಗೊಡು. ಭೂಮಂಡಲವೇ, ನಾನು ಹೇಳುವುದನ್ನು ಕೇಳು.

ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.

ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.

ಯೆಹೋವನು ವಾದಿಸುವುದಕ್ಕೂ, ಜನರಿಗೆ ನ್ಯಾಯತೀರಿಸುವುದಕ್ಕೂ ಎದ್ದು ನಿಂತಿದ್ದಾನೆ.

ದೇಶವೇ, ದೇಶವೇ, ದೇಶವೇ ಯೆಹೋವನ ಮಾತನ್ನು ಕೇಳು!

¶ “ನರಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಈ ಪ್ರವಾದನೆಯನ್ನು ನುಡಿ, ‘ಇಸ್ರಾಯೇಲಿನ ಪರ್ವತಗಳೇ, ಯೆಹೋವನ ವಾಕ್ಯವನ್ನು ಕೇಳಿರಿ.

¶ ಆಗ ಆತನು ನನಗೆ ಹೀಗೆ ಅಪ್ಪಣೆಮಾಡಿದನು, “ನೀನು ಈ ಎಲುಬುಗಳ ಮೇಲೆ ಪ್ರವಾದಿಸಿ, ಹೀಗೆ ನುಡಿ, ‘ಒಣಗಿದ ಎಲುಬುಗಳೇ, ಯೆಹೋವನ ವಾಕ್ಯವನ್ನು ಕೇಳಿರಿ’.

ಜನಾಂಗಗಳೇ, ನೀವೆಲ್ಲರೂ ಕೇಳಿರಿ. ಭೂಮಂಡಲವೇ, ಭೂಮಿಯಲ್ಲಿರುವ ಸಮಸ್ತರೇ, ಕಿವಿಗೊಡಿರಿ, ಕರ್ತನಾದ ಯೆಹೋವನು ತನ್ನ ಪವಿತ್ರಾಲಯದೊಳಗಿಂದ ನಿಮಗೆ ವಿರುದ್ಧವಾಗಿ ಸಾಕ್ಷಿಕೊಡುತ್ತಾನೆ.

ಆತನು, ‹“ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು”› ಎಂದು ನಿಮಗೆ ಹೇಳುತ್ತೇನೆ ಅಂದನು.