¶ ಆ ದಿನದಲ್ಲಿ, ಐಗುಪ್ತದಿಂದ ಅಶ್ಶೂರಕ್ಕೆ ಹೋಗಲು ರಾಜಮಾರ್ಗವಿರುವುದು. ಅಶ್ಶೂರ್ಯರು ಐಗುಪ್ತಕ್ಕೂ, ಐಗುಪ್ತರು ಅಶ್ಶೂರಕ್ಕೂ ಹೋಗಿ ಬರುವರು. ಐಗುಪ್ತರು ಅಶ್ಶೂರ್ಯರೊಂದಿಗೆ ಯೆಹೋವನನ್ನು ಆರಾಧಿಸುವರು.
TSK
TSK · ಮಿಕ 7:12
Treasury of Scripture Knowledge references in ಕನ್ನಡ IRV.
‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ, ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ,
ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.
¶ ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.
ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.
ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು.