ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.
TSK
TSK · ಮಿಕ 7:13
Treasury of Scripture Knowledge references in ಕನ್ನಡ IRV.
ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.
ಆಕೆಯ ಕೈಕೆಲಸಕ್ಕೆ ಪ್ರತಿಫಲವನ್ನು ಸಲ್ಲಿಸಿರಿ, ಆಕೆಯ ಕಾರ್ಯಗಳೇ ಪುರದ್ವಾರಗಳಲ್ಲಿ ಆಕೆಯನ್ನು ಪ್ರಶಂಸಿಸಲಿ.
¶ ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು, “ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು.
ಭೂಮಿಯು ಬಟ್ಟಬರಿದಾಗುವುದು, ಅದು ಸಂಪೂರ್ಣ ಸುಲಿಗೆಯಾಗುವುದು, ಯೆಹೋವನೇ ಇದನ್ನು ನುಡಿದಿದ್ದಾನೆ.
ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.
ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಪ್ರತಿಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ.
ವೃಕ್ಷದ ಬುಡದ ಮೋಟನ್ನು ಉಳಿಸಿರಿ ಎಂದು ಅಪ್ಪಣೆಯಾಯಿತಲ್ಲಾ; ಇದರ ತಾತ್ಪರ್ಯವೇನೆಂದರೆ ಪರಲೋಕಕ್ಕೆ ಸರ್ವಾಧಿಕಾರ ಉಂಟೆಂಬುವುದನ್ನು ನೀನು ತಿಳಿದುಕೊಂಡ ನಂತರ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವುದು ಎಂಬುವುದೇ.
ಆದಕಾರಣ ಯೆರೂಸಲೇಮೇ, ನಿನಗೆ ಕ್ರೂರವಾದ ಪೆಟ್ಟು ಹಾಕುವೆನು. ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.
ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.