TSK

TSK · ಮಿಕ 7:18

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅದಕ್ಕೆ ಮೋಶೆಯು, “ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು” ಎಂದು ಕೇಳಿದನು.

“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.

ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.

ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.

ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.

ದೇವರೇ, ನಿನ್ನ ನೀತಿಯು ಆಕಾಶವನ್ನು ನಿಲುಕುವಷ್ಟು ಮಹೋನ್ನತವಾಗಿದೆ. ಮಹತ್ತರವಾದ ಕೃತ್ಯಗಳನ್ನು ನಡೆಸಿದ ದೇವರೇ, ನಿನಗೆ ಸಮಾನರು ಯಾರು?

ನಮ್ಮನ್ನು ರಕ್ಷಿಸುವ ದೇವರೇ, ನಮಗೆ ಅಭಿಮುಖನಾಗು; ನಮ್ಮ ವಿಷಯದಲ್ಲಿ ಬೇಸರವನ್ನು ಬಿಡು.

ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.

ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.

ಯೆಹೋವನು ಕನಿಕರವೂ, ದಯೆಯೂ, ದೀರ್ಘಶಾಂತಿಯೂ, ಪೂರ್ಣಪ್ರೀತಿಯೂ ಉಳ್ಳವನು.

ತಂದೆಯು ಮಕ್ಕಳನ್ನು ಕನಿಕರಿಸುವಂತೆ, ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.

ನೀನು ಪಾಪವನ್ನು ಕ್ಷಮಿಸುವವನಾದುದರಿಂದ, ಮನುಷ್ಯರ ಭಯಭಕ್ತಿಗೆ ನೀನೇ ಪಾತ್ರನು.

¶ “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.

ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?

ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.

“ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ!

ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ; ಹೊಸ ಬಲವನ್ನು ತಂದುಕೊಂಡಿ; ಆದುದರಿಂದ ನೀನು ಸೋತುಹೋಗಲಿಲ್ಲ.

ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.

‘ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ?’ ಎಂದು ಅಂದುಕೊಳ್ಳುತ್ತಿದ್ದಿ. ಇಗೋ, ನೀನು ಹೀಗೆ ಮಾತನಾಡಿದರೇನು? ಅನೇಕ ದುಷ್ಕೃತ್ಯಗಳನ್ನು ನಡೆಸಿ ಕೃತಾರ್ಥಳಾಗಿರುವೆ.” ಎಂಬುದೇ.

ನೆರೆಹೊರೆಯವರೂ, ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು, ‘ಯೆಹೋವನ ಜ್ಞಾನವನ್ನು ಪಡೆಯಿರಿ’ ಎಂದು ಇನ್ನು ಮೇಲೆ ಬೋಧಿಸಬೇಕಾಗಿರುವುದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು. ನಾನು ಅವರ ಅಪರಾಧವನ್ನು ಕ್ಷಮಿಸಿ ಅವರ ಪಾಪವನ್ನು ನನ್ನ ನೆನಪಿಗೆ ಎಂದಿಗೂ ತರುವುದಿಲ್ಲ. ಇದು ಯೆಹೋವನ ನುಡಿ” ಎಂಬುದೇ.

ಆಗ ಅವನು ಅರಮನೆಯಿಂದ ಹೊರಟು ಬೆನ್ಯಾಮೀನಿನ ಬಾಗಿಲಿನಲ್ಲಿ ಕುಳಿತುಕೊಂಡಿದ್ದ ಅರಸನ ಬಳಿಗೆ ಹೋಗಿ,

ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರಿಸಲ್ಪಡುವುದಿಲ್ಲ; ನೀತಿನ್ಯಾಯಗಳನ್ನು ನಡೆಸುತ್ತಿದ್ದುದರಿಂದ ನಿಶ್ಚಯವಾಗಿ ಬದುಕುವನು.

ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.

ಯೆಹೋವನು ನನಗೆ, “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಲು ನಾನು, “ಒಂದು ನೂಲುಗುಂಡು” ಎಂದು ಉತ್ತರ ಕೊಟ್ಟೆನು. ಆಗ ಕರ್ತನು, “ಇಗೋ, ನನ್ನ ಜನರಾದ ಇಸ್ರಾಯೇಲಿನ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಅವರನ್ನು ಕಂಡುಕಾಣದಂತೆ ದಂಡಿಸುವೆನು.

ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.

ಆ ಊನವಾದ ಜನವನ್ನು ಉಳಿಸಿ ಕಾಪಾಡುವೆನು, ದೂರತಳ್ಳಲ್ಪಟ್ಟ ಪ್ರಜೆಯನ್ನು ಪ್ರಬಲ ಜನಾಂಗವನ್ನಾಗಿ ಮಾಡುವೆನು, ಯೆಹೋವನು ಚೀಯೋನ್ ಪರ್ವತದಲ್ಲಿ ಈ ದಿನದಿಂದ ಎಂದೆಂದಿಗೂ ಅವರ ರಾಜನಾಗಿರುವನು.

ಯೆಹೋವನ ವರವಾದ ಇಬ್ಬನಿಯೂ ಮತ್ತು ಹುಲ್ಲನ್ನು ಬೆಳೆಯಿಸುವ ಹದಮಳೆಗಳೂ ಮಾನವರ ಪ್ರಯತ್ನವಿಲ್ಲದೆ ಹೇಗೆ ಸಮೃದ್ಧಿಯಾಗಿ ಬೆಳೆಯುವವು, ಮಾನವರ ನೆರವನ್ನು ನಿರೀಕ್ಷಿಸದೆ ಹೇಗೆ ಹಿತಕರವಾಗಿರುವವೋ, ಹಾಗೆಯೇ ಯಾಕೋಬಿನ ಜನಶೇಷವು ಬಹು ಜನಾಂಗಗಳ ಮಧ್ಯದಲ್ಲಿ ಹಿತಕರವಾಗಿರುವುದು.

ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.

‹ಸಿಕ್ಕಿದ ಮೇಲೆ ಆಕೆಯು ತನ್ನ ಗೆಳತಿಯರನ್ನೂ ನೆರೆಹೊರೆಯವರನ್ನೂ ಸೇರಿಸಿಕೊಂಡು, ‘ಕಳೆದು ಹೋಗಿದ್ದ ಬೆಳ್ಳಿನಾಣ್ಯ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಹೇಳುವಳಲ್ಲವೇ.›

‹ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.›

¶ “ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.

ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ,

ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.