TSK

TSK · ಮಿಕ 7:19

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನಿಮ್ಮ ದೇವರಾದ ಯೆಹೋವನು ನಿಮ್ಮ ಮತ್ತು ನಿಮ್ಮ ಸಂತತಿಯವರ ಹೃದಯಕ್ಕೆ ಸುನ್ನತಿಮಾಡುವನು. ಆಗ ನೀವು ಆತನನ್ನು ಸಂಪೂರ್ಣವಾದ ಹೃದಯದಿಂದಲೂ ಮತ್ತು ಸಂಪೂರ್ಣವಾದ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಕೊಳ್ಳುವಿರಿ.

ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು.

ನಿನ್ನ ರೌದ್ರವನ್ನೆಲ್ಲಾ ತೊರೆದಿದ್ದಿ; ನಿನ್ನ ಉಗ್ರಕೋಪವನ್ನು ಬಿಟ್ಟಿದ್ದಿ.

ಪೂರ್ವಕ್ಕೂ, ಪಶ್ಚಿಮಕ್ಕೂ ಎಷ್ಟು ದೂರವೋ, ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ.

ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.

ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.

ಯೆಹೋವನು ಇಂತೆನ್ನುತ್ತಾನೆ, “ಎಫ್ರಾಯೀಮು ನನಗೆ ಪ್ರಿಯಪುತ್ರ, ಮುದ್ದುಮಗುವಲ್ಲವೇ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ, ಅವನನ್ನು ಕರುಣಿಸುವೆನು.

ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.”

ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು.

ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.

ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.

ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರುದ್ಧವಾಗಿ ಕಾದಾಡಿ ನನ್ನನ್ನು ಸೆರೆಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ನನ್ನನ್ನು ಒಪ್ಪಿಸುವಂಥದ್ದಾಗಿದೆ.

ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವುದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವುದಾದರೆ ಜೀವಿಸುವಿರಿ.

ದೇವರು ನಮ್ಮಲ್ಲಿ ಇರಿಸಿರುವ ಪವಿತ್ರಾತ್ಮನು ಅಭಿಮಾನತಾಪದಿಂದ ನಮಗೋಸ್ಕರ ಹಂಬಲಿಸುತ್ತಾನೆಂಬ ವೇದೋಕ್ತಿ ಬರಿ ಮಾತೆಂದು ನೀವು ಭಾವಿಸುತ್ತೀರೋ?