TSK

TSK · ನಹೂಮ 1:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದನು. ಆದುದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.

ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು.

ಆಕಾಶಮಂಡಲದ ಸ್ತಂಭಗಳು, ಆತನ ಗದರಿಕೆಯಿಂದ ಬೆರಗಾಗಿ ಕದಲುವವು.

ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.

ದೇವರು ಪ್ರತ್ಯಕ್ಷನಾಗಿದ್ದಾನೆಂದು ಭೂಮಿಯು ಕಂಪಿಸಿತು; ಮೇಘಮಂಡಲವು ಮಳೆಸುರಿಸಿತು. ಇಸ್ರಾಯೇಲರ ದೇವರು ಪ್ರತ್ಯಕ್ಷನಾಗಿದ್ದಾನೆಂದು, ಆ ಸೀನಾಯ್ ಬೆಟ್ಟವು ಕದಲಿತು.

ಯೆಹೋವನ ಮುಂದೆ ಸಮುದ್ರವೂ, ಅದರಲ್ಲಿರುವುದೆಲ್ಲವೂ, ಭೂಮಿಯೂ, ಅದರ ನಿವಾಸಿಗಳೂ ಘೋಷಿಸಲಿ.

ಪರ್ವತಗಳು ಟಗರುಗಳಂತೆಯೂ, ಗುಡ್ಡಗಳು ಕುರಿಮರಿಗಳಂತೆಯೂ ಹಾರಾಡಿದವು.

ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.

ಪರ್ವತಗಳನ್ನು ನೋಡಿದೆನು, ಆಹಾ, ನಡುಗುತ್ತಿದ್ದವು, ಎಲ್ಲಾ ಗುಡ್ಡಗಳೂ ಅಲ್ಲಕಲ್ಲೋಲವಾಗಿದ್ದವು.

ಆಗ ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಕಾಡುಮೃಗಳು ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು, ಭೂಮಂಡಲದ ಸಕಲ ಮನುಷ್ಯರೂ ನನ್ನೆದುರಿಗೆ ನಡುಗುವವು; ಪರ್ವತಗಳು ಉರುಳಿಹೋಗುವವು, ಝರಿಗಳು ಕವಚಿಗೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.’”

ಬೆಂಕಿಗೆ ಎದುರು ಕರಗುವ ಮೇಣದಂತೆಯೂ ಮತ್ತು ಇಳಿಜಾರು ಪ್ರದೇಶದಲ್ಲಿ ರಭಸವಾಗಿ ಹರಿಯುವ ನೀರಿನಂತೆ ಕಣಿವೆಗಳು, ಪರ್ವತಗಳು ಆತನ ಮುಂದೆ ಸೀಳಿ ಕರಗಿ ಕೊಚ್ಚಿಹೊಗುತ್ತಿವೆ.

ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;

ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.