ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.
TSK
TSK · ನಹೂಮ 2:1
Treasury of Scripture Knowledge references in ಕನ್ನಡ IRV.
ಜನಗಳನ್ನು ಕೋಪೋದ್ರೇಕದಿಂದ ಎಡೆಬಿಡದೆ ಹೊಡೆದು, ಜನಾಂಗಗಳನ್ನು ಸಿಟ್ಟಿನಿಂದ ತಡೆಯಿಲ್ಲದೆ ಹಿಂಸಿಸಿ, ಅಧೀನಮಾಡಿಕೊಂಡರು.
ಹಸಿದವನು ಕನಸು ಕಂಡು ಆಹಾ, ತಿನ್ನುತ್ತಿದ್ದೇನೆ ಎಂದುಕೊಂಡಂತಾಗುವುದು; ಎಚ್ಚೆತ್ತಾಗ ಅವನ ಹೊಟ್ಟೆ ಬರಿದಾಗಿಯೇ ಇರುವುದು. ಬಾಯಾರಿದವನು ಸ್ವಪ್ನದಲ್ಲಿ ಇಗೋ ನೀರು ಕುಡಿಯುತ್ತಿದ್ದೇನೆ ಎಂದುಕೊಂಡಂತಾಗುವುದು; ನಿದ್ರೆಯಿಂದ ಎಚ್ಚೆತ್ತಾಗ ಬಲಹೀನನಾಗಿದ್ದು, ಬಳಲಿ ನೀರನ್ನು ಬಯಸುತ್ತಾ ಬಾಯಾರಿಕೆಯಿಂದ ಇರುವನು. ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ಜನಾಂಗಗಳಿಗೂ ಇದೇ ಗತಿಯಾಗುವುದು.
ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.
ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!
ಬಾಬೆಲೇ, ನೀನು ನನಗೆ ಗದೆಯು ಮತ್ತು ಶಸ್ತ್ರವು, ನಾನು ನಿನ್ನಿಂದ ಜನಾಂಗಗಳನ್ನು ಒಡೆದುಬಿಡುತ್ತೇನೆ;
¶ ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿಟ್ಟುಕೋ, ನಿನ್ನ ಕೋಟೆಗಳನ್ನು ಬಲಪಡಿಸಿಕೋ; ಮಣ್ಣಿಗೆ ಇಳಿ, ಜೇಡಿಮಣ್ಣನ್ನು ತುಳಿ, ಇಟ್ಟಿಗೆಯ ಅಚ್ಚನ್ನು ಹಿಡಿ.