TSK

TSK · ನಹೂಮ 3:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ನೀನು ನನ್ನನ್ನು ಗುಂಡಿಯಲ್ಲಿ ಮುಳುಗಿಸಿ, ನನ್ನ ಬಟ್ಟೆಗಳಿಗೆ ನಾನು ಅಸಹ್ಯನಾಗುವಂತೆ ಮಾಡುವಿ.

ಆತನು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾನೆ, ಧೂಳುಬೂದಿಗಳಿಗೆ ಸಮಾನನಾಗಿದ್ದೇನೆ.

ನಿನ್ನನ್ನು ನೋಡುವವರು ನಿನ್ನನ್ನು ದಿಟ್ಟಿಸಿ ನೋಡಿ, ಯೋಚಿಸುತ್ತಾ, ‘ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ ಪಟ್ಟಣಗಳನ್ನು ನಾಶಮಾಡಿ,

ನಾನು ಗರಸು ಕಲ್ಲುಚೂರುಗಳನ್ನು ಅಗೆಯುವಂತೆ ಮಾಡಿ ನನ್ನ ಹಲ್ಲುಗಳನ್ನು ಮುರಿದುಬಿಟ್ಟು, ನನ್ನನ್ನು ಬೂದಿಯಲ್ಲಿ ತಳ್ಳಿದ್ದಾನೆ.

ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.

ಗಮನವಿಟ್ಟು ಕೇಳಿ, ನಿಮ್ಮ ಸಂತಾನ ಬೆಳೆಯದಂತೆ ಶಪಿಸುವೆ; ನಿಮ್ಮ ಮೇಲೆ ಯಜ್ಞಪಶುಗಳ ಸಗಣಿಯನ್ನು ಎರಚುವೆನು. ಈ ಅವಮಾನದಿಂದ ನೀವು ತಿಪ್ಪೆಯ ಪಾಲಾಗುವಿರಿ.

ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣದ ತೀರ್ಪು ಹೊಂದಿದವರಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ. ನಾವು ಲೋಕದಲ್ಲಿ ದೇವದೂತರಿಗೂ, ಮನುಷ್ಯರಿಗೂ ಅಂತೂ ಜಗತ್ತಿಗೆಲ್ಲಾ ಹಾಸ್ಯಾಸ್ಪದವಾದ ನೋಟವಾದೆವು.

ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.