TSK

TSK · ನೆಹೆಮಿಯ 1:2

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆರೂಸಲೇಮಿನಲ್ಲಿದ್ದ ಎಲ್ಲಾ ಪ್ರಭುಗಳನ್ನೂ, ಭಟರನ್ನೂ, ಕಮ್ಮಾರರನ್ನೂ, ಪರಾಕ್ರಮಶಾಲಿಗಳನ್ನು ಒಟ್ಟಾಗಿ ಹತ್ತು ಸಾವಿರ ಜನರನ್ನು ಸೆರೆಹಿಡಿದು ತನ್ನ ದೇಶಕ್ಕೆ ಕರೆದುಕೊಂಡು ಹೋದನು. ದೇಶದಲ್ಲಿ ಕೇವಲ ಸಾಮಾನ್ಯ ಜನರಾಗಿದ್ದ ಬಡವರು ಹೊರತಾಗಿ ಯಾರನ್ನೂ ಬಿಡಲಿಲ್ಲ.

ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವನವನ್ನು ಅನುಗ್ರಹಿಸಿದ್ದಾನೆ.

ಆನಂತರ ನನ್ನ ತಮ್ಮನಾದ ಹನಾನಿಗೂ, ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ, ಕೋಟೆಯ ಅಧಿಕಾರಿಯೂ ಆದ ಹನನ್ಯನಿಗೂ ಯೆರೂಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆನು.

ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ ನನ್ನ ಬಲಗೈಯು ತನ್ನ ಕೌಶಲ್ಯವನ್ನು ಮರೆತು ಹೋಗಲಿ.

ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.

ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದು ನಡೆದ ಸಂಗತಿಯನ್ನು ನಿನಗೆ ತಿಳಿಸುವನು.