TSK

TSK · ನೆಹೆಮಿಯ 13:1

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಅಮ್ಮೋನಿಯರಾಗಲಿ ಅಥವಾ ಮೋವಾಬ್ಯರಾಗಲಿ ಯೆಹೋವನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಯೆಹೋವನ ಸಭೆಗೆ ಸೇರಬಾರದು.

ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.

¶ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನೂ, ಅರಬಿಯನಾದ ಗೆಷೆಮನೂ ಈ ವರ್ತಮಾನವನ್ನು ಕೇಳಿದಾಗ ಅವರು ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿ, “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರುದ್ಧವಾಗಿ ತಿರುಗಿ ಬೀಳಬೇಕೆಂದಿದ್ದೀರೋ?” ಎಂದು ಕೇಳಿದರು.

ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು.

ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡು ತಮ್ಮ ದೇವರಾದ ಯೆಹೋವನ ಧರ್ಮನಿಯಮಗಳ ಗ್ರಂಥವನ್ನು ಪಾರಾಯಣಮಾಡಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.

ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ;

ಯೆಹೋವನ ಶಾಸ್ತ್ರದಲ್ಲಿ ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ಇಲ್ಲದೆ ಇರುವುದಿಲ್ಲ, ಜೊತೆಯಿಲ್ಲದೆ ಒಂದೂ ಇಲ್ಲ. ಏಕೆಂದರೆ ಆತನ ಬಾಯಿಯೇ ಅದನ್ನು ಆಜ್ಞಾಪಿಸಿತು. ಆತನ ಆತ್ಮವು ಇವುಗಳನ್ನು ಒಟ್ಟುಗೂಡಿಸಿತು.

¶ ಹೀಗಿರಲಾಗಿ ಆತನು ತಾನು ಬೆಳೆದುಬಂದ ಊರಾದ ನಜರೇತಿಗೆ ಬಂದು, ತನ್ನ ವಾಡಿಕೆಯ ಪ್ರಕಾರ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಗೆ ಹೋಗಿ ಪವಿತ್ರಗ್ರಂಥವನ್ನು ಓದುವುದಕ್ಕಾಗಿ ಎದ್ದು ನಿಂತನು.

ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.