¶ “‘ಹೊಲದ ಬೆಳೆಯಾಗಲಿ ಇಲ್ಲವೇ ತೋಟದ ಹಣ್ಣುಗಳಾಗಲಿ ಭೂಮಿಯಿಂದುಂಟಾದ ಎಲ್ಲಾ ಆದಾಯದಲ್ಲಿ ಹತ್ತನೆಯ ಒಂದು ಪಾಲು ಯೆಹೋವನದಾಗಿರಬೇಕು, ಅದು ಯೆಹೋವನಿಗೆ ಮೀಸಲಾದದ್ದು.
TSK
TSK · ನೆಹೆಮಿಯ 13:12
Treasury of Scripture Knowledge references in ಕನ್ನಡ IRV.
¶ “ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕಾಗಿ ಇಸ್ರಾಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಕೊಟ್ಟಿದ್ದೇನೆ.
¶ ಪ್ರತಿವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮ ಭಾಗವನ್ನು ಪ್ರತ್ಯೇಕಿಸಬೇಕು.
ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು.
¶ ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಗಿದ್ದರಿಂದ ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತುಗಳು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.