“ಯೆಹೋವನೇ, ದಯವಿಟ್ಟು ನಾನು ನಂಬಿಗಸ್ತನಾಗಿಯೂ ನಿನಗೆ, ಪ್ರಾಮಾಣಿಕನಾಗಿಯೂ ಶ್ರದ್ಧೆಯಿಂದಲೂ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪುಮಾಡಿಕೋ” ಎಂದು ಹೇಳಿ ಹಿಜ್ಕೀಯನು ಬಹಳವಾಗಿ ಕಣ್ಣೀರಿಟ್ಟು ಪ್ರಾರ್ಥಿಸಿದನು.
TSK
TSK · ನೆಹೆಮಿಯ 13:14
Treasury of Scripture Knowledge references in ಕನ್ನಡ IRV.
ಅವನು ಇಸ್ರಾಯೇಲರ ಕುರಿತಾಗಿಯೂ ದೇವರ ಮತ್ತು ದೇವಾಲಯದ ವಿಷಯದಲ್ಲಿಯೂ ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.
ನಿನ್ನ ದೇವರ ಆಲಯಕ್ಕೋಸ್ಕರ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.
¶ ಎಜ್ರನು ನೀಡಿದ ಪ್ರತಿಕ್ರಿಯೆ, “ನಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯವನ್ನು ಶೋಭಾಯಮಾನದ ಸ್ಥಿತಿಗೆ ತರುವುದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸುಮಾಡಿದ್ದಾನೆ. ಅರಸನು ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ.
ಆ ಮೇಲೆ ನಾನು ಲೇವಿಯರಿಗೆ, “ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು” ಎಂದು ಆಜ್ಞಾಪಿಸಿದೆನು. ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು, ನಿನ್ನ ಮಹಾಕೃಪೆಗೆ ಅನುಸಾರವಾಗಿ ನನ್ನನ್ನು ಕನಿಕರಿಸು.
ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.
ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.