TSK

TSK · ನೆಹೆಮಿಯ 13:15

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ “ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವುದಕ್ಕೆ ನೆನಪಿನಲ್ಲಿಟ್ಟುಕೊಳ್ಳಬೇಕು.

ಆದುದರಿಂದ ಇಸ್ರಾಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆಯು ಅವರಿಗೂ, ಅವರ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.

ಆರು ದಿನಗಳು ನೀವು ಕೆಲಸ ಮಾಡಬೇಕು; ಏಳನೆಯ ದಿನವು ಪರಿಶುದ್ಧವಾದ ದಿನ; ಅದು ಯೆಹೋವನಿಗೆ ಮೀಸಲಾದ ಸಬ್ಬತ್ ದಿನವಾಗಿರುವುದರಿಂದ ಅಂದು ನೀವು ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಿಬಿಡಬೇಕು; ಆ ದಿನದಲ್ಲಿ ಕೆಲಸಮಾಡುವವನಿಗೆ ಮರಣದಂಡನೆಯಾಗಬೇಕು;

¶ “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್‍ ದಿನವನ್ನು ದೇವರ ದಿನವೆಂದು ಆಚರಿಸಬೇಕು.

ಯೆಹೋವನು ಅವರನ್ನು ತನ್ನ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಅವರ ಮುಖಾಂತರವಾಗಿ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.

ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.

ಕೊನೆಗೆ ನಾನು ಅವರಿಗೆ, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಪುನಃ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು” ಎಂದು ಗದರಿಸಲು, ಅವರು ಅಂದಿನಿಂದ ಸಬ್ಬತ್ ದಿನದಲ್ಲಿ ಪುನಃ ಬರಲೇ ಇಲ್ಲ.

ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.

ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.

ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.

¶ “‘ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿ ಬಿದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇಮಿಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಇವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು’ ಅಂದುಕೊಂಡೆನು.

“ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆನು? ನಿನ್ನನ್ನು ಯಾವ ವಿಷಯದಲ್ಲಿ ಬೇಸರಗೊಳಿಸಿದೆನು? ನನ್ನ ಮೇಲೆ ಸಾಕ್ಷಿಹೇಳು.

ಯೆಹೂದ್ಯರಿಗೂ, ಗ್ರೀಕರಿಗೂ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ದೃಢವಾಗಿ ಬೋಧಿಸುವವನಾಗಿದ್ದೆನು, ಇದೆಲ್ಲಾ ನಿಮಗೇ ತಿಳಿದಿದೆ.

¶ ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.

¶ ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.