ಈ ಮಕ್ಕಳು ಒರ್ಫಾ, ರೂತ್ ಎಂಬ ಹೆಸರಿನ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರ್ಷಗಳ ಕಾಲ ಅಲ್ಲಿ ವಾಸವಾಗಿದ್ದರು.
TSK
TSK · ನೆಹೆಮಿಯ 13:23
Treasury of Scripture Knowledge references in ಕನ್ನಡ IRV.
¶ ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು, “ಇಸ್ರಾಯೇಲರಲ್ಲಿ ಸಾಧಾರಣಜನರೂ, ಯಾಜಕರೂ, ಲೇವಿಯರೂ, ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು ಮತ್ತು ಅಮೋರಿಯರು ಎಂಬ ಅನ್ಯ ದೇಶಗಳವರ ಬಳಿಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿದ್ದಾರೆ.
ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ, “ನೀವು ಅನ್ಯಜನರ ಹೆಣ್ಣುಗಳನ್ನು ಮದುವೆಮಾಡಿಕೊಂಡು ಇಸ್ರಾಯೇಲರ ಅಪರಾಧಗಳನ್ನು ಹೆಚ್ಚಿಸಿದ್ದೀರಿ.
ಸನ್ಬಲ್ಲಟನೂ, ಟೋಬೀಯನೂ, ಅರಬಿಯರೂ, ಅಮ್ಮೋನಿಯರೂ, ಅಷ್ಡೋದಿನವರೂ ಯೆರೂಸಲೇಮಿನ ಗೋಡೆಯ ಜೀರ್ಣೋದ್ಧಾರ ಕಾರ್ಯವು ಮುಂದುವರಿದು, ಅದರ ಸಂದುಗಳು ತಿರುಗಿ ಸರಿಯಾಗುತ್ತಾ ಬರುವುದನ್ನು ಕೇಳಿ ಬಹುಕೋಪಗೊಂಡರು.
ದೇಶನಿವಾಸಿಗಳು ಮಾರುವುದಕ್ಕೋಸ್ಕರ ತರುವ ಯಾವ ಸರಕುಗಳನ್ನೂ, ಧಾನ್ಯವನ್ನೂ, ಸಬ್ಬತ್ ಮೊದಲಾದ ಪರಿಶುದ್ಧ ದಿನಗಳಲ್ಲಿ ಅವುಗಳನ್ನು ನಾವು ಕೊಂಡುಕೊಳ್ಳುವುದಿಲ್ಲ. ಪ್ರತಿ ಏಳನೆಯ ವರ್ಷದ ಭೂಮಿಯ ಸಾಗುವಳಿಯನ್ನೂ ಇತರರು ಕೊಡಬೇಕಾದ ಸಾಲವನ್ನೂ ಮನ್ನಾ ಮಾಡಿಬಿಡುತ್ತೇವೆ.
¶ ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?