ಅರಣ್ಯಕಾಂಡ 11:4
TSK
¶ ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು?
TSK
Treasury of Scripture Knowledge references in ಕನ್ನಡ IRV.
¶ ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲರು ಪುನಃ ಕಣ್ಣೀರಿಡುತ್ತಾ ಅಯ್ಯೋ, “ಮಾಂಸವು ನಮಗೆ ಹೇಗೆ ಸಿಕ್ಕೀತು?
ಇಸ್ರಾಯೇಲ್ ಸಂತಾನದವರು ಎಲ್ಲಾ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು, ಎದ್ದು ನಿಂತುಕೊಂಡು ತಮ್ಮ ಪಾಪಗಳನ್ನೂ, ತಮ್ಮ ಪೂರ್ವಿಕರ ಪಾಪಗಳನ್ನೂ ಆತನಿಗೆ ಅರಿಕೆಮಾಡಿದರು.
ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.
ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.
ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.