TSK

TSK · ನೆಹೆಮಿಯ 13:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.

ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.

ಅರಸನಿಗೆ ಹೀಗೆ ಉತ್ತರಕೊಟ್ಟೆನು, “ಅರಸನೇ ನಿಮ್ಮ ಚಿತ್ತವಿರುವುದಾದರೆ ಮತ್ತು ತಮ್ಮ ಸೇವಕನಾದ ನಾನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವನ್ನು ತಿರುಗಿ ಕಟ್ಟುವುದಕ್ಕಾಗಿ ಯೆಹೂದ ದೇಶಕ್ಕೆ ಹೋಗಲು ನನಗೆ ಅಪ್ಪಣೆಯಾಗಬೇಕು” ಎಂದು ಹೇಳಿದೆನು.

ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳ ವರೆಗೆ ಅಂದರೆ ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಭತ್ಯದಿಂದ ಜೀವನಮಾಡಲಿಲ್ಲ.