TSK

TSK · ನೆಹೆಮಿಯ 2:10

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.

¶ ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿಯು ಸನ್ಬಲ್ಲಟನಿಗೆ ಗೊತ್ತಾದಾಗ ಅವನು ಬಹಳ ಹೊಟ್ಟೆಕಿಚ್ಚಿನಿಂದ ಕೋಪಗೊಂಡು ಯೆಹೂದ್ಯರನ್ನು ಗೇಲಿ ಮಾಡಿದನು.

¶ ನಾನು ಪೌಳಿಗೋಡೆಯನ್ನು ಪುನಃ ಕಟ್ಟಿಸಿದೆನು, ಆದರೆ ಹೆಬ್ಬಾಗಿಲುಗಳನ್ನೂ ಇನ್ನೂ ಇಡಿಸಿರಲಿಲ್ಲ. ಜೀರ್ಣೋದ್ಧಾರದ ಕಾರ್ಯಗಳೆಲ್ಲವೂ ಪೂರ್ಣವಾಯಿತೆಂಬುದು ಸನ್ಬಲ್ಲಟ್, ಟೋಬೀಯ, ಅರಬಿಯನಾದ ಗೆಷೆಮ್ ಇವರಿಗೂ, ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು.

¶ ಇದಕ್ಕಿಂತ ಮೊದಲು ಯಾಜಕನಾದ ಎಲ್ಯಾಷೀಬನು ನಮ್ಮ ದೇವಾಲಯದ ಕೊಠಡಿಗಳ ಮೇಲ್ವಿಚಾರಕನಾಗಿ ನೇಮಿಸಲ್ಪಟ್ಟಿದ್ದನು. ಇವನು ಟೋಬೀಯನ ಸಂಬಂಧಿಕನಾಗಿದ್ದನು.

ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.

ಆಳುಗಳು ಕುದುರೆ ಸವಾರಿ ಮಾಡುವುದನ್ನೂ, ಪ್ರಭುಗಳು ಆಳುಗಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ.

ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದೆವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತದೆ.

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.

ಜನಾಂಗಗಳವರು ನೋಡಿ ತಮ್ಮ ಮಹಾ ಶಕ್ತಿಗೂ ನಾಚಿಕೆಪಡುವರು. ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವರು. ಅವರ ಕಿವಿ ಕೇಳದಿರುವುದು.

ದೇವಾಲಯದ ಅಧಿಪತಿಯೂ, ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ಇದರಿಂದ ಏನು ಪರಿಣಾಮವಾದೀತೋ ಎಂದು ಕಳವಳಗೊಂಡರು.