TSK

TSK · ನೆಹೆಮಿಯ 2:12

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಯೆಹೋಶುವನು ಗಿಲ್ಗಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣಮಾಡಿ ತಟ್ಟನೆ ಅವರ ಮೇಲೆ ಬಿದ್ದನು.

ಆದುದರಿಂದ ನೀನು ಈ ರಾತ್ರಿಯೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು. ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು. ಅವನೂ ಅವನ ಜೊತೆಯಲ್ಲಿರುವವರೂ

ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು.

ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.

ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು. ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಯೆಹೋವನು ಹೇಳುತ್ತಾನೆ.

ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.

ಅದೇ ರಾತ್ರಿ ಯೋಸೇಫನು ಎದ್ದು ಕೂಸನ್ನೂ ಅದರ ತಾಯಿಯನ್ನೂ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಹೆರೋದನು ತೀರಿಹೋಗುವ ತನಕ ಅವರು ಅಲ್ಲೇ ಇದ್ದರು.

¶ ನಿಮ್ಮ ವಿಷಯವಾಗಿ ನನಗಿರುವ ಹಿತ ಚಿಂತನೆಯನ್ನು ದೇವರು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ಆತನಿಗೆ ಸ್ತೋತ್ರಮಾಡುತ್ತೇನೆ.

ಏಕೆಂದರೆ ದೇವರು ತನ್ನ ವಾಕ್ಯವನ್ನು ನೆರವೇರಿಸುವುದಕ್ಕಾಗಿಯೂ, ನೆರವೇರಿಸುವಂತೆಯೂ ತನ್ನ ಚಿತ್ತವನ್ನು ಅವರು ಒಂದೇ ಅಭಿಪ್ರಾಯವುಳ್ಳವರಾಗಿ ತಮ್ಮ ಅಧಿಕಾರವನ್ನು ಮೃಗಕ್ಕೆ ಕೊಡುವುದಕ್ಕೂ ಇದನ್ನು ಅವುಗಳ ಹೃದಯಗಳಲ್ಲಿ ಇರಿಸಿದ್ದನು.