TSK

TSK · ನೆಹೆಮಿಯ 2:13

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು.

ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು.

ತಗ್ಗಿನ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಹಾನೂನನೂ, ಜಾನೋಹ ಊರಿನವರು. ಇವರು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಬಾಗಿಲು, ತಿರುಗುಣಿ, ಅಗುಳಿಗಳನ್ನು ಹಾಕಿಸಿ ಅಲ್ಲಿಂದ ತಿಪ್ಪೆ ಬಾಗಿಲಿನವರೆಗೂ ಸಾವಿರ ಮೊಳದ ಗೋಡೆಯನ್ನು ಕಟ್ಟಿದರು.

ಆನಂತರ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದು, ಆರಾಧನೆ ಮಂಡಳಿಯವರಿಗೆ ಎರಡು ದೊಡ್ಡ ಗುಂಪುಗಳಾಗಿ ಆಲ್ಲಿ ನಿಲ್ಲಬೇಕೆಂದು ಅಪ್ಪಣೆಮಾಡಿದನು. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.