TSK

TSK · ನೆಹೆಮಿಯ 2:14

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆದರೆ ಅಶ್ಶೂರದ ಅರಸನು ಲಾಕೀಷಿನಿಂದ ಮಹಾಸೈನ್ಯ ಸಹಿತವಾಗಿ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬುವವರನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ಗಟ್ಟಾ ಹತ್ತಿ ಯೆರೂಸಲೇಮಿಗೆ ಬಂದು ಅಗಸರ ಹೊಲದ ಮೇಲೆ ಹೋಗುವ ರಾಜಮಾರ್ಗದ ಹತ್ತಿರ ಇರುವ ಕೆರೆಯ ಕಾಲುವೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು.

ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.

ಇವನ ನಂತರ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವರು ಬೇತ್ಚೂರಿನ ಒಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.