¶ ಇವರಿಬ್ಬರೂ ಫಿಲಿಷ್ಟಿಯರ ಕಾವಲು ದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಇಬ್ರಿಯರು ತಾವು ಅಡಗಿಕೊಂಡಿದ್ದ ಗುಹೆಗಳಿಂದ ಹೊರಗೆ ಬರುತ್ತಲಿದ್ದಾರೆ” ಎಂದು ತಮ್ಮೊಳಗೆ ಮಾತನಾಡಿಕೊಂಡರು.
TSK
TSK · ನೆಹೆಮಿಯ 4:2
Treasury of Scripture Knowledge references in ಕನ್ನಡ IRV.
ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ಧೈರ್ಯಗುಂದಿಸಿ ದೇವಾಲಯ ಕಟ್ಟದ ಹಾಗೆ ಬೆದರಿಸಿದರು. ಇದರೊಂದಿಗೆ ಅವರ ಉದ್ದೇಶವನ್ನು ಕೆಡಿಸುವುದಕ್ಕೋಸ್ಕರ ಹಣಕೊಟ್ಟು ವಕೀಲರನ್ನು ನೇಮಿಸಿಕೊಂಡರು.
ಇತ್ತ ಯೆಹೂದ್ಯರು, “ಹೊರೆ ಹೊರುವವರ ಬಲವು ಕುಂದಿಹೋಯಿತು, ಧೂಳಿನ ರಾಶಿಯು ವಿಪರೀತವಾಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದ ಆಗುವುದಿಲ್ಲ” ಎಂದರು.
ದೇವರು ತಮಗೆ ವಿಶೇಷ ಆನಂದವನ್ನು ಉಂಟುಮಾಡಿದ್ದರಿಂದ, ಜನರು ಆ ದಿನದಲ್ಲಿ ಅನೇಕ ಯಜ್ಞಗಳನ್ನು ಸಮರ್ಪಿಸಿ ತಮ್ಮ ಹೆಂಡತಿ ಮಕ್ಕಳೊಡನೆ ಮಹೋತ್ಸವಮಾಡಿದರು. ಯೆರೂಸಲೇಮಿನ ಉತ್ಸವದ ಹರ್ಷಧ್ವನಿಯು ಬಹಳ ದೂರದವರೆಗೂ ಕೇಳಿಸಿತು.
ಆತನು ನನಗೆ “ನರಪುತ್ರನೆ, ಈ ಎಲುಬುಗಳಿಗೆ ಜೀವವು ಬರಬಹುದೋ?” ಎಂದು ಕೇಳಲು ನಾನು, “ಕರ್ತನಾದ ಯೆಹೋವನೇ, ನೀನೇ ಬಲ್ಲೆ” ಎಂದು ಉತ್ತರಕೊಟ್ಟೆನು.
ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.
ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.