TSK

TSK · ನೆಹೆಮಿಯ 4:5

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಪ್ರೀತಿಸ್ವರೂಪನಾದ ದೇವರೇ, ನನ್ನನ್ನು ಕರುಣಿಸು; ಕರುಣಾನಿಧಿಯೇ, ನನ್ನ ದ್ರೋಹವನ್ನೆಲ್ಲಾ ಅಳಿಸಿಬಿಡು.

ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. ಸೆಲಾ

ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.

ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.

ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ. ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು.