¶ ಅದಕ್ಕೆ ನಾನು, “ಕಳವಳಪಡಬೇಡಿರಿ, ಅವರಿಗೆ ಭಯಪಡಬೇಡಿರಿ.
TSK
TSK · ನೆಹೆಮಿಯ 4:8
Treasury of Scripture Knowledge references in ಕನ್ನಡ IRV.
“ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.
ಕೀರ್ತನೆಗಳು 2:1
TSK
ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?
ಯೆಶಾಯ 8:9
TSK
ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.
ದಾನಿಯೇಲನು 9:25
TSK
ಇದನ್ನು ತಿಳಿದು ಮನದಟ್ಟುಮಾಡಿಕೋ; ಯೆರೂಸಲೇಮ್ ಜೀರ್ಣೋದ್ಧಾರವಾಗಿ ಕಟ್ಟಲ್ಪಡಲಿ ಎಂಬ ದೈವೋಕ್ತಿಯು ಹರಡುವ ದಿನದಿಂದ ಅಭಿಷಿಕ್ತನಾದ ಪ್ರಭುವು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಲ್ಪಟ್ಟು ಅರವತ್ತೆರಡು ವಾರ ಇರುವುದು; ಅದಕ್ಕೆ ಚೌಕವೂ ಕಂದಕವೂ ಇರುವವು; ಆ ಕಾಲವು ಬಹು ಕಷ್ಟಕಾಲ.