TSK

TSK · ನೆಹೆಮಿಯ 5:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಹಣ ಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.

ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.

¶ ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ ಬೇರೆ ಯಾವುದನ್ನಾಗಲಿ ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು.

ಅವನು ಅವರಿಗೆ, “ನೀವು ಹೇಗೆ ಕೆಲಸ ನಿರ್ವಹಿಸುತ್ತೀರಿ ಎಂಬುದರ ಬಗ್ಗೆ ಎಚ್ಚರಿಕೆಯಿಂದಿರಿ. ನೀವು ನ್ಯಾಯತೀರಿಸುವುದು ಮನುಷ್ಯರಿಗಾಗಿ ಅಲ್ಲ, ಯೆಹೋವನಿಗಾಗಿ. ನ್ಯಾಯವಿಚಾರಣೆ ಮಾಡುವಾಗ ಆತನು ನಿಮ್ಮ ಮಧ್ಯದಲ್ಲಿ ಇರುತ್ತಾನೆ.

ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾ

ಅವನು ಸಾಲಕ್ಕೆ ಬಡ್ಡಿ ಕೇಳದವನೂ, ನಿರಪರಾಧಿಯ ಕೇಡಿಗಾಗಿ ಲಂಚವನ್ನು ತೆಗೆದುಕೊಳ್ಳದವನೂ ಆಗಿರಬೇಕು. ಇಂಥವನು ಎಂದಿಗೂ ಕದಲುವುದಿಲ್ಲ.

ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.

ನಿನ್ನವರು ರಕ್ತ ಸುರಿಸುವುದಕ್ಕೆ ಲಂಚ ತೆಗೆದುಕೊಂಡಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ದೋಚಿಕೊಂಡು ನನ್ನನ್ನು ಮರೆತೇ ಬಿಟ್ಟಿದ್ದಾರೆ ಇದು ಕರ್ತನಾದ ಯೆಹೋವನ ನುಡಿ.

‹ಅವನು ಅವರ ಮಾತನ್ನು ಕೇಳದೆ ಹೋದರೆ ಅದನ್ನು ಸಭೆಗೆ ಹೇಳು. ಅವನು ಸಭೆಯ ಮಾತನ್ನು ಕೇಳದೆ ಹೋದರೆ ಅವನು ನಿನಗೆ ಅನ್ಯನಂತೆಯೂ›‹ಸುಂಕದವನಂತೆಯೂ ಇರಲಿ.›

¶ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಅವನಲ್ಲಿ ತಪ್ಪು ಕಾಣಿಸಿಕೊಂಡದ್ದರಿಂದ ನಾನು ಅವನನ್ನು ಮುಖಾಮುಖಿಯಾಗಿ ಖಂಡಿಸಿದೆನು.

¶ ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.