ಆದಿಕಾಂಡ 33:17
TSK
ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.
TSK
Treasury of Scripture Knowledge references in ಕನ್ನಡ IRV.
ಯಾಕೋಬನು ಪ್ರಯಾಣಮಾಡಿ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ದನಗಳಿಗೆ ಆಶ್ರಯವನ್ನೂ ಮಾಡಿಸಿದನು. ಆದುದರಿಂದ ಆ ಸ್ಥಳಕ್ಕೆ “ಸುಕ್ಕೋತ್” ಎಂದು ಹೆಸರಾಯಿತು.
ಮೊದಲನೆಯ ದಿನದಲ್ಲಿ ಶ್ರೇಷ್ಠವೃಕ್ಷದ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳ ವರೆಗೆ ಸಂಭ್ರಮವಾಗಿರಬೇಕು.
¶ ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.