TSK

TSK · ನೆಹೆಮಿಯ 8:6

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ಆ ಮನುಷ್ಯನು ಇದನ್ನು ಕೇಳಿ ಅಡ್ಡಬಿದ್ದು ಯೆಹೋವನಿಗೆ ನಮಸ್ಕರಿಸಿ,

ನೀವು ಅವರಿಗೆ, ‘ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಸ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು’” ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು.

¶ ಅನಂತರ ದಾವೀದನು ನೆರೆದ ಸಭೆಯ ಮುಂದೆ ಯೆಹೋವನನ್ನು ಸ್ತುತಿಸಿ ಹೇಳಿದ್ದೇನೆಂದರೆ, “ನಮ್ಮ ಪಿತೃವಾದ ಇಸ್ರಾಯೇಲಿನ ದೇವರೇ. ಯೆಹೋವನೇ, ಯುಗಯುಗಾಂತರಗಳಲ್ಲಿ ನಿನಗೆ ಕೊಂಡಾಟವಾಗಲಿ.

ಅವನು ಹೇಳಿದ್ದೇನೆಂದರೆ, “ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ನನ್ನ ತಂದೆಯಾದ ದಾವೀದನಿಗೆ ವಾಗ್ದಾನ ಮಾಡಿದಂತೆ ಈಗ ತನ್ನಿಂದ ನೆರವೇರಿಸುವಂತೆ ಮಾಡಿದ್ದಾನೆ.

ಈಗ ನಮ್ಮ ಮೇಲಿರುವ ಆತನ ಕೋಪಾಗ್ನಿಯು ತೊಲಗಿ ಹೋಗುವಂತೆ ಇಸ್ರಾಯೇಲಿನ ದೇವರಾದ ಯೆಹೋವನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ಮನಸ್ಸುಳ್ಳವನಾಗಿದ್ದೇನೆ.

ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು.

ಇಸ್ರಾಯೇಲರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.

ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು.

ಮಹಾಪರಿಶುದ್ಧ ಸ್ಥಳದ ಕಡೆಗೆ ಕೈಯೆತ್ತಿ, ಯೆಹೋವನನ್ನು ಕೊಂಡಾಡಿರಿ.

“ಹಾಗೆಯೇ ಆಗಲಿ, ಯೆಹೋವನು ಹಾಗೆಯೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ!

‹ನಮ್ಮನ್ನು ಶೋಧನೆಯೊಳಗೆ ಸೇರಿಸದೆ› ‹ಕೆಡುಕನಿಂದ; ನಮ್ಮನ್ನು ತಪ್ಪಿಸು›

ನೀನು ಆತ್ಮನಿಂದ ಮಾತ್ರ ದೇವರ ಸ್ತೋತ್ರ ಮಾಡಿದರೆ ನೀನು ಹೇಳಿದ್ದು ತಿಳಿಯದೆ ಇರುವ ಇನ್ನೊಬ್ಬನು ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು “ಆಮೆನ್” ಎಂದು ಹೇಗೆ ಹೇಳಬಲ್ಲನು? ನೀನು ಮಾತನಾಡಿದು ಅವನಿಗೆ ತಿಳಿಯುವುದಿಲ್ಲವಲ್ಲಾ?

¶ ಹೀಗಿರಲಾಗಿ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ವಾಗ್ವಾದವೂ ಇಲ್ಲದವರಾಗಿ, ಭಕ್ತಿಪೂರ್ವಕವಾಗಿ ಪವಿತ್ರ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ಅಪೇಕ್ಷಿಸುತ್ತೇನೆ.

ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು,