TSK

TSK · ನೆಹೆಮಿಯ 8:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.

¶ ಇವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಅಧಿಕಾರಿಗಳಾದ ಬೆನ್ಹೈಲ್, ಓಬದ್ಯ, ಜೆಕರ್ಯ ನೆತನೇಲ್, ಮಿಕಾಯ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕೋಸ್ಕರ ಯೆಹೂದ ದೇಶದ ಪಟ್ಟಣಗಳಿಗೆ ಕಳುಹಿಸಿದನು.

ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.

ಪಷ್ಹೂರನ ಸಂತಾನದವರಾದ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಮತ್ತು ಎಲ್ಲಾಸ.

¶ ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್ ಸಮೀಪದಲ್ಲೇ ತನ್ನ ಪಟ್ಟಣದವರೊಡನೆ ಕಟ್ಟುತ್ತಿದ್ದ ಕೆಯೀಲದ ಅರ್ಧ ಪಟ್ಟಣಗಳ ಒಡೆಯನಾದ ಹಷಬ್ಯ ಇವರು.

ಇವರ ನಂತರ ಬೆನ್ಯಾಮೀನ್ ಮತ್ತು ಹಷ್ಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದರು. ಇವರ ನಂತರ ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ. ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು.

ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡು ತಮ್ಮ ದೇವರಾದ ಯೆಹೋವನ ಧರ್ಮನಿಯಮಗಳ ಗ್ರಂಥವನ್ನು ಪಾರಾಯಣಮಾಡಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಯೆಹೋವನಿಗೆ ಅಡ್ಡ ಬಿದ್ದು ಪಾಪಗಳನ್ನು ಅರಿಕೆಮಾಡಿದರು.

ಲೇವಿಗೋತ್ರ ಪ್ರಧಾನರಲ್ಲಿ: ದೇವಾಲಯದ ಹೊರಗಿನ ಕಾರ್ಯಗಳ ಮೇಲ್ವಿಚಾರಕನಾದ ಶಬ್ಬೆತೈ, ಯೋಜಾಬಾದ್ ಎಂಬುವವರು,

ಈ ಲೇವಿಯರ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಅದ ಯೋಯಾಕೀಮ್, ದೇಶಾಧಿಪತಿಯಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನಾದ ಎಜ್ರ ಇವರ ಕಾಲದಲ್ಲಿದ್ದವರು:

ತುತ್ತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ, ಜೆಕರ್ಯ, ಹನನ್ಯ ಇವರೂ