¶ “‘ತುತ್ತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡೆಸದೆ ದೇವಾರಾಧನೆಗಾಗಿ ಸಭೆಕೂಡಬೇಕು.
TSK
TSK · ನೆಹೆಮಿಯ 8:9
Treasury of Scripture Knowledge references in ಕನ್ನಡ IRV.
ಅಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.
ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ಮತ್ತು ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ಸಂಭ್ರಮಿಸಬೇಕು.
¶ ಅರಸನು ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ಕೇಳಿದಾಗ, ಬಟ್ಟೆಗಳನ್ನು ಹರಿದುಕೊಂಡನು.
ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.
¶ ಅರಸನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ ಬಟ್ಟೆಗಳನ್ನು ಹರಿದುಕೊಂಡನು.
ಎಲ್ಲಾ ಇಸ್ರಾಯೇಲರನ್ನು ಉಪದೇಶಿಸತಕ್ಕವರೂ, ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಾಯೇಲ್ ರಾಜನೂ ಆದ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇರಿಸಿರಿ; ಅದನ್ನು ಹೆಗಲಿನ ಮೇಲೆ ಹೊತ್ತುಕೊಳ್ಳುವ ಅಗತ್ಯವಿಲ್ಲ. ಅದು ನಿಮ್ಮ ಹೆಗಲುಗಳಿಗೆ ಹೊರೆಯಾಗಿರಬಾರದು; ಇನ್ನು ಮುಂದೆ ನಿಮ್ಮ ದೇವರಾದ ಯೆಹೋವನನ್ನೂ, ಆತನ ಪ್ರಜೆಗಳಾದ ಇಸ್ರಾಯೇಲರನ್ನೂ ಸೇವಿಸಿರಿ.
¶ ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ.
¶ ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.
ಆ ಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮಿನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮನಿಯಮದ ಸಾರವನ್ನು ಜನರು ಗ್ರಹಿಸುವಂತೆ ವಿವರಿಸಿದರು.
ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತ್ತಿದ್ದ ದ್ವಾರಪಾಲಕರು: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬುವವರು.
ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.
ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.