ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು.
TSK
TSK · ಅರಣ್ಯಕಾಂಡ 1:50
Treasury of Scripture Knowledge references in ಕನ್ನಡ IRV.
ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”
¶ ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡಿದ ಕಾಲದಲ್ಲಿದ್ದ ಮೋಶೆ ಮತ್ತು ಆರೋನರ ವಂಶದವರು.
ಗೇರ್ಷೋನ್ಯರ ಗೋತ್ರದವರು ದೇವದರ್ಶನದ ಗುಡಾರದ ಹಿಂದೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.
ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.
ಇಸ್ರಾಯೇಲರಿಗಾಗಿ ದೇವದರ್ಶನ ಗುಡಾರದ ಸೇವಾಕಾರ್ಯವನ್ನು ನಡಿಸುವುದಕ್ಕೂ ದೋಷಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಹೀಗಿರುವುದರಿಂದ ಇಸ್ರಾಯೇಲರು ದೇವಾಲಯದ ಹತ್ತಿರಕ್ಕೆ ಬಂದಾಗ ಅವರಿಗೆ ಅಪಾಯವು ಸಂಭವಿಸುವುದಿಲ್ಲ.”
¶ ಆ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ಆರಂಭಿಸಿದರು. ಅವರ ವಿಷಯದಲ್ಲಿ ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.
ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.
¶ ದಾವೀದನು ವಯೋವೃದ್ಧನಾಗಿ ತನ್ನ ಜೀವಮಾನದ ಕೊನೆಯ ದಿನಗಳಲ್ಲಿ ತನ್ನ ಮಗನಾದ ಸೊಲೊಮೋನನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸಿದನು.
ಇಸ್ರಾಯೇಲರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿ ಬಂಗಾರವನ್ನೂ, ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.
¶ ಲೇವಿಯರಲ್ಲಿ: ಯೇಷೂವ, ಬಿನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ ಮತ್ತು ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಸ್ತುತಿಯ ನಾಯಕರಾಗಿದ್ದರು.
ಜೆರುಬ್ಬಾಬೆಲ್ ಮತ್ತು ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಾಯೇಲರು ಗಾಯಕರಿಗೂ ದ್ವಾರಪಾಲಕರಿಗೂ ಪ್ರತಿದಿನ ಜೀವನಾಂಶವನ್ನು ಕೊಡುತ್ತಿದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಮತ್ತು ಲೇವಿಯರು ತಮ್ಮದರಲ್ಲಿಯ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.
¶ ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ, ಆರಾಧನೆ ನಡೆಸತಕ್ಕ ಲೇವಿಯರೂ, ಗಾಯಕರೂ ತಮ್ಮ ತಮ್ಮ ಭೂಸ್ವಾಸ್ಥ್ಯಗಳಿಗೆ ಹಿಂತಿರುಗಿ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.
ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.