TSK

TSK · ಅರಣ್ಯಕಾಂಡ 1:7

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

¶ ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ ಸೂರ್ಯೋದಯವಾಗುವ ಕಡೆಗೆ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ತಮ್ಮ ದಂಡಿನ ಧ್ವಜದ ಹತ್ತಿರ ಡೇರೆಗಳನ್ನು ಹಾಕಿಕೊಳ್ಳಬೇಕು. ಯೆಹೂದ ಕುಲದ ಸೈನ್ಯಾಧಿಪತಿಯು ಅಮ್ಮೀನಾದಾಬನ ಮಗನಾದ ನಹಶೋನನು.

¶ ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿ ಇದ್ದವನು ಅಮ್ಮೀನಾದಾಬನ ಮಗನಾದ ನಹಶೋನನು.

ಅಮ್ಮೀನಾದಾಬನು ನಹಶೋನನನ್ನು ಪಡೆದನು; ನಹಶೋನನು ಸಲ್ಮೋನನನ್ನು ಪಡೆದನು;

¶ ಅಬ್ರಹಾಮನ ಮಗನು ಇಸಾಕನು. ಇಸಾಕನ ಮಗನು ಯಾಕೋಬನು. ಯಾಕೋಬನ ಮಗನು ಯೆಹೂದನು, ಅವನ ಅಣ್ಣತಮ್ಮಂದಿರು ಯೆಹೂದನ ಮಕ್ಕಳು.