TSK

TSK · ಅರಣ್ಯಕಾಂಡ 10:21

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.

¶ ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರೂ, ಹೆಬ್ರೋನ್ ಗೋತ್ರದವರೂ, ಉಜ್ಜೀಯೇಲ್ ಗೋತ್ರದವರೂ ಇದ್ದರು.

ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.

¶ ಕೆಹಾತ್ಯರಿಗೆ ಮಾತ್ರ ಏನೂ ಕೊಡಲಿಲ್ಲ. ಏಕೆಂದರೆ ಅವರು ದೇವದರ್ಶನ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲಿನ ಮೇಲೆ ಹೊರುತ್ತಿದ್ದರು.

ಆ ಕಾಲದಲ್ಲಿ ದಾವೀದನು, “ಲೇವಿಯರ ಹೊರತಾಗಿ ಯಾರೂ ಮಂಜೂಷವನ್ನು ಹೊರಬಾರದು, ಅದನ್ನು ಹೊರುವುದಕ್ಕೂ, ಸದಾಕಾಲ ತನ್ನ ಸೇವೆಮಾಡುವುದಕ್ಕೂ ಯೆಹೋವನು ಅವರನ್ನೇ ಆರಿಸಿಕೊಂಡಿದ್ದಾನೆ” ಎಂದು ಹೇಳಿದನು.