TSK

TSK · ಅರಣ್ಯಕಾಂಡ 11:16

Treasury of Scripture Knowledge references in ಕನ್ನಡ IRV.

ಅಂಗೀಕಾರಕ್ಕೆ ಹಿಂತಿರುಗಿ

ಅವರಲ್ಲದೆ ಐಗುಪ್ತ ದೇಶದಲ್ಲಿ ಯೋಸೇಫನಿಗೆ ಹುಟ್ಟಿದವರು ಇಬ್ಬರು. ಐಗುಪ್ತ ದೇಶಕ್ಕೆ ಹೋದ ಯಾಕೋಬನ ಕುಟುಂಬದವರೆಲ್ಲರು ಒಟ್ಟು ಎಪ್ಪತ್ತು ಮಂದಿ.

¶ ಯೆಹೋವನು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬಿದ್ದು ಆರಾಧಿಸಬೇಕು.

¶ ಆಗ ಮೋಶೆ ಎದ್ದು ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.

¶ ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.

ಇಸ್ರಾಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಮತ್ತು ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು; ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.

¶ ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.